ADVERTISEMENT

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ: ಕೆಲಕಾಲ ಆತಂಕ

ಪಿಟಿಐ
Published 20 ಮೇ 2022, 5:52 IST
Last Updated 20 ಮೇ 2022, 5:52 IST
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ   

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ನಸುಕಿನಲ್ಲಿ ಹುಸಿ ಬಾಂಬ್ ಕರೆ ಬಂದಿದ್ದು, ಭದ್ರತಾ ಸಿಬ್ಬಂದಿ ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.

ಪೊಲೀಸರ ಪ್ರಕಾರ, ಏರ್‌ಪೋರ್ಟ್ ಪೊಲೀಸ್ ಕಂಟ್ರೋಲ್ ರೂಮ್‌ಗೆ ಬೆಳಗಿನ ಜಾವ 3.45 ರ ಸುಮಾರಿಗೆ ಕರೆ ಬಂದಿದ್ದು, ಇದರ ಪರಿಣಾಮವಾಗಿ ಅಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ತೀವ್ರಪರಿಶೀಲನೆ ನಡೆಸಿದ್ದಾರೆ.

ಸುಮಾರು ಮೂರೂವರೆ ಗಂಟೆಗಳ ಹುಡುಕಾಟದ ನಂತರ ಅಧಿಕಾರಿಗಳು ಇದು ಹುಸಿ ಕರೆ ಎಂದು ತೀರ್ಮಾನಿಸಿದ್ದಾರೆ.

ADVERTISEMENT

‘ನಾವು ಇನ್ನೂ ಪರಿಶೀಲನೆಯಲ್ಲಿ ತೊಡಗಿದ್ದೇವೆ ಆದರೆ, ಇದು ಹುಸಿ ಕರೆ ಎಂದು ತೋರುತ್ತದೆ’ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಕರೆ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.