ADVERTISEMENT

ಬೆಳಗಾವಿ ಗಡಿ ವಿವಾದ: ವಕೀಲರು, ನಡ್ಡಾ ಭೇಟಿಗೆ ಸದ್ಯದಲ್ಲೇ ದೆಹಲಿಗೆ: ಬೊಮ್ಮಾಯಿ

ಪಿಟಿಐ
Published 28 ನವೆಂಬರ್ 2022, 6:30 IST
Last Updated 28 ನವೆಂಬರ್ 2022, 6:30 IST
   

ಬೆಂಗಳೂರು: ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭೇಟಿಗೆ ಸದ್ಯದಲ್ಲೇ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.

ಇದೇವೇಳೆ, ಸುಪ್ರೀಂ ಕೋರ್ಟ್ ವಕೀಲರನ್ನು ಭೇಟಿಯಾಗಿ ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಹೀಗಾಗಿ, ಗುಜರಾತ್ ಚುನಾವಣೆ ಬಳಿಕ ರಾಜ್ಯದ ಸಚಿವ ಸಂಪುಟ ವಿಸ್ತರಣೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.

‘ನಾನು ದೆಹಲಿಗೆ ಹೋಗುತ್ತಿದ್ದೇನೆ. ಅಲ್ಲಿ ಪಕ್ಷದ ಅಧ್ಯಕ್ಷ ನಡ್ಡಾ ಅವರನ್ನು ಭೇಟಿಮಾಡಬೇಕೆಂದುಕೊಂಡಿದ್ದೇನೆ. ನನಗೆ ಇನ್ನೂ ಅವರ ಭೇಟಿಗೆ ಅನುಮತಿಸಿಕ್ಕಿಲ್ಲ. ಅನುಮತಿ ಸಿಗುವ ಭರವಸೆ ಇದೆ’ಎಂದು ಬೊಮ್ಮಾಯಿ ಹೇಳಿದ್ದಾರೆ.

ADVERTISEMENT

ಈ ಮಧ್ಯೆ, ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾಗಿ ಬೆಳಗಾವಿ ಗಡಿ ವಿವಾದದ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸುಸುತ್ತೇನೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ಅವರನ್ನೂ ಭೇಟಿ ಮಾಡುವುದಾಗಿ ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದಸಂಪುಟದಲ್ಲಿ ಖಾಲಿ ಇರುವ 6 ಸ್ಗಾನಗಳನ್ನು ತುಂಬುವ ಮೂಲಕಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.