ADVERTISEMENT

ಪುಸ್ತಕ ಬಹುಮಾನ ‘ಕನ್ನಡ ಪುಸ್ತಕ ಸೊಗಸು–2019’: ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 6 ಮೇ 2020, 20:20 IST
Last Updated 6 ಮೇ 2020, 20:20 IST

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು ‘ಕನ್ನಡ ಪುಸ್ತಕ ಸೊಗಸು–2019’ ಬಹುಮಾನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮೇ 30ರವರೆಗೆ ವಿಸ್ತರಿಸಿದೆ.

2019ರಲ್ಲಿ ಕನ್ನಡದಲ್ಲಿ ಪ್ರಕಟಿತವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ವಿವಿಧ ಬಹುಮಾನಗಳನ್ನು ನೀಡಲಾಗುತ್ತದೆ. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರು ಅರ್ಜಿ ಸಲ್ಲಿಸಬಹುದಾಗಿದೆ.

2019ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನೂ ಮೇ 30ರವರೆಗೆ ವಿಸ್ತರಿಸಲಾಗಿದ್ದು, 18ರಿಂದ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.

ADVERTISEMENT

‌ಸ್ವ ವಿವರ ಹಾಗೂ ಪುಸ್ತಕದ ಮಾಹಿತಿಯ ಜತೆಗೆ ಪ್ರಕಟಿತ ಕೃತಿಯ ಎರಡು ಪ್ರತಿಗಳನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–560 002 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಪರ್ಕಕ್ಕೆದೂ. ಸಂ: 080 22484516

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.