ADVERTISEMENT

ಬೋವಿ ನಿಗಮ| ಸ್ಥಳೀಯ ಶಾಸಕರ ಸಮಿತಿಯಿಂದ ಫಲಾನುಭವಿ ಆಯ್ಕೆ: ಸರ್ಕಾರ

​ಪ್ರಜಾವಾಣಿ ವಾರ್ತೆ
Published 28 ಜನವರಿ 2023, 19:04 IST
Last Updated 28 ಜನವರಿ 2023, 19:04 IST
   

ಬೆಂಗಳೂರು: ಬೋವಿ ಅಭಿವೃದ್ಧಿ ನಿಗಮದ ಸಂಪೂರ್ಣ ಅನುದಾನವನ್ನು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ಸಮಿತಿಯಿಂದಲೇ ಶೇ 100ರಷ್ಟು ಅರ್ಹ ಫಲಾನುಭವಿಗಳನ್ನು ಗುರುತಿಸಿ ಅನುದಾನ ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿಗಮದಲ್ಲಿದ್ದ ಸಮಾಜ ಕಲ್ಯಾಣ ಸಚಿವರ ವಿವೇಚನಾ ಕೋಟಾ ಶೇ 15, ಆಡಳಿತ ನಿರ್ದೇಶಕರ ಮಂಡಳಿಯ ಕೋಟಾ ಶೇ 5 ಸೇರಿ ಶೇ 20ರಷ್ಟು ಸಾಂಸ್ಥಿಕ ಕೋಟಾವನ್ನು ರದ್ದುಪಡಿಸಲಾಗಿದೆ. ಮುಖ್ಯಮಂತ್ರಿಯವರ ಸೂಚನೆಯಂತೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

‘ಸಾಂಸ್ಥಿಕ ಕೋಟಾದಲ್ಲಿ ಅನುದಾನ ದುರ್ಬಳಕೆಯಾಗುತ್ತಿದ್ದು, ಈ ಬಗ್ಗೆ ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ನಿಗಮದಲ್ಲಿ ಪಾರದರ್ಶಕತೆ ತರುವ ಜೊತೆಗೆ ಅನುದಾನವನ್ನು ಸಮರ್ಪಕವಾಗಿ ಹಂಚಿಕೆ ಮಾಡಲು ಸಾಂಸ್ಥಿಕ ಕೋಟಾವನ್ನು ತಕ್ಷಣ ರದ್ದುಪಡಿಸಬೇಕು’ ಎಂದು ಮುಖ್ಯಮಂತ್ರಿ ಸೂಚಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.