ಬೆಂಗಳೂರು: ವಸತಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿರುವ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ಅವರು ‘ಜಮೀರ್ ಕೆಲಸದ ಬಗ್ಗೆ ಜನರು ಹೇಳಬೇಕು’ ಎಂದಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಣದೀಪ್ ಸಿಂಗ್ ಸುರ್ಜೇವಾಲಾ ಅವರು ತಮ್ಮ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಮೀರ್ ಅವರು ಹೇಳಿಕೊಂಡಿದ್ದಾರೆ. ಆದರೆ ಅವರ ಇಲಾಖೆಯ ಕಾರ್ಯವೈಖರಿಯಿಂದ ಸಂತ್ರಸ್ತರಾಗಿರುವ ಸಾಮಾನ್ಯ ಜನರನ್ನು ಮಾತನಾಡಿಸಿದರೆ, ಅವರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತದೆ’ ಎಂದು ಹೇಳಿದ್ದಾರೆ.
‘ಈಗ ನನ್ನ ಬಳಿ ಒಟ್ಟು 27 ಜನರ ವಿವರ ಮತ್ತು ಮೊಬೈಲ್ ಸಂಖ್ಯೆಗಳಿವೆ. ಅವರನ್ನು ಮಾತನಾಡಿಸಿದರೆ, ಜಮೀರ್ ಅವರ ಇಲಾಖೆಯ ಕಾರ್ಯವೈಖರಿ ಬಯಲಾಗುತ್ತದೆ. ವಸತಿ ಇಲಾಖೆಯಲ್ಲಿ ಏನೆಲ್ಲಾ ಅಕ್ರಮ ನಡೆಯುತ್ತದೆ ಎಂಬುದನ್ನು ಹೇಳುತ್ತಾರೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.