ADVERTISEMENT

‘ಬ್ರಾಹ್ಮಣರಿಗೆ ಜಾತಿ ಪ್ರಮಾಣಪತ್ರ’

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 20:49 IST
Last Updated 15 ಜುಲೈ 2020, 20:49 IST

ಮೈಸೂರು: ಬ್ರಾಹ್ಮಣರಿಗೆ ಜಾತಿ ಪ್ರಮಾಣಪತ್ರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಬುಧವಾರ ಇಲ್ಲಿ ತಿಳಿಸಿದರು.

‘ಶಾಸಕರು, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಬ್ರಾಹ್ಮಣ ಮಹಾಸಭಾ ಅಧ್ಯಕ್ಷರು ಸೇರಿದಂತೆ ಈ ಸಮುದಾಯದ ಹಲವರು ನನಗೆ ಮನವಿ ಮಾಡಿದ್ದರು. ಹೀಗಾಗಿ, ಕಂದಾಯ ಇಲಾಖೆ ಈ ತೀರ್ಮಾನ ಕೈಗೊಂಡಿದೆ. ತಾಲ್ಲೂಕು ಕಚೇರಿಗಳಲ್ಲಿ ಸದ್ಯದಲ್ಲೇ ಪ್ರಮಾಣಪತ್ರ ಸಿಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT