ADVERTISEMENT

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ ಇಂದಿನಿಂದ

ಕೋಟೇಶ್ವರದಲ್ಲಿ ಕಾರ್ಯಕ್ರಮ: ಮುಖ್ಯಮಂತ್ರಿ ಯಡಿಯೂಪ್ಪ ಭಾಗಿ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2019, 20:15 IST
Last Updated 27 ಡಿಸೆಂಬರ್ 2019, 20:15 IST
ಕುಂದಾಪುರ ಸಮೀಪದ ಕೋಟೇಶ್ವರದ ವರದರಾಜ ಎಂ.ಶೆಟ್ಟಿ ಸರ್ಕಾರಿ  ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆಯಲಿರುವ  10ನೇ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನಕ್ಕಾಗಿ ಹಾಕಿರುವ ಡಾ.ವಿ.ಎಸ್‌.ಆಚಾರ್ಯ ಸಭಾಂಗಣ ವೇದಿಕೆ. 
ಕುಂದಾಪುರ ಸಮೀಪದ ಕೋಟೇಶ್ವರದ ವರದರಾಜ ಎಂ.ಶೆಟ್ಟಿ ಸರ್ಕಾರಿ  ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆಯಲಿರುವ  10ನೇ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನಕ್ಕಾಗಿ ಹಾಕಿರುವ ಡಾ.ವಿ.ಎಸ್‌.ಆಚಾರ್ಯ ಸಭಾಂಗಣ ವೇದಿಕೆ.    

ಕುಂದಾಪುರ: ಕೋಟೇಶ್ವರದವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ 10ನೇ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಮ್ಮೇಳನ ಡಿ.28 ಹಾಗೂ 29 ರಂದು ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬ್ರಾಹ್ಮಣ ಸಮಾಜದ ಮುಖಂಡರು, ಗಣ್ಯರು ಭಾಗವಹಿಸಲಿದ್ದಾರೆ.

ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ ಅಭಿವೃದ್ಧಿಗೆ ಕ್ರಮ, ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ₹ 100 ಕೋಟಿ ಅನುದಾನ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆರ್ಥಿಕ ಹಿಂದುಳಿದವರ ಮೀಸಲಾತಿ ರಾಜ್ಯದಲ್ಲಿ ಅನುಷ್ಠಾನಕ್ಕೆ ಒತ್ತಾಯ ಸೇರಿದಂತೆ ಹಲವು ವಿಚಾರಗಳ ಕುರಿತು ಸಮ್ಮೇಳನದಲ್ಲಿ ಚರ್ಚೆಯಾಗಲಿದೆ.

ಸಮಾಜದ ಅಭಿವೃದ್ಧಿಗೆ ವಿಶೇಷ ಅನುದಾನ, ಮೀಸಲಾತಿ, ಬ್ರಾಹ್ಮಣ ಯುವಕರ ಮದುವೆ ಹಾಗೂ ಪೌರೋಹಿತ್ಯಕ್ಕೆ ಪ್ರೋತ್ಸಾಹ ಸೇರಿದಂತೆ ಹಲವು ನಿರ್ಣಯಗಳು ಸಮ್ಮೇಳನದಲ್ಲಿ ಅಂಗೀಕಾರವಾಗುವ ಸಾಧ್ಯತೆಗಳಿವೆ.ಸಮಾವೇಶಕ್ಕೆ ಬರುವವರ ವಾಸ್ತವ್ಯಕ್ಕೆ 41 ಕಲ್ಯಾಣ ಮಂಟಪ ಹಾಗೂ ವಸತಿ ಗೃಹಗಳನ್ನು ಕಾಯ್ದಿರಿಸಲಾಗಿದೆ. 60 ಸಾವಿರ ಜನರಿಗೆ ಊಟದ ವ್ಯವಸ್ಥೆ, ಕುಂದಾಪುರದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ವಿಪ್ರಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಶೃಂಗೇರಿ ಮಠದ ವಿಧುಶೇಖರ ಭಾರತೀತೀರ್ಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಸಚಿವರು, ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.