ADVERTISEMENT

ಅಂಧ ವಿದ್ಯಾರ್ಥಿಗಳಿಗೆ 15 ದಿನದಲ್ಲಿ ಪುಸ್ತಕ ವಿತರಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 16:12 IST
Last Updated 17 ಸೆಪ್ಟೆಂಬರ್ 2021, 16:12 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಲಿಪಿ ಪಠ್ಯ ಪುಸ್ತಕವನ್ನು 15 ದಿನಗಳಲ್ಲಿ ವಿತರಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಪ್ರಸಕ್ತ ಸಾಲಿನಿಂದ ಪಠ್ಯ ಪುಸ್ತಕ ವಿತರಿಸಲಾಗುವುದು ಎಂದು ಹಿಂದಿನ ವರ್ಷ ಸರ್ಕಾರ ನೀಡಿದ್ದ ಭರವಸೆ ಗಮನಿಸಿದ ಪೀಠ, ಈ ಆದೇಶ ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ರಾಷ್ಟ್ರೀಯ ಅಂಧರ ಒಕ್ಕೂಟ (ಎನ್‌ಎಫ್‌ಬಿ), ‘ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ಸರ್ಕಾರ ಪಠ್ಯ ಪುಸ್ತಕ ವಿತರಿಸಬೇಕು. ಪುಸ್ತಕ ಮತ್ತು ಇತರ ಕಲಿಕಾ ಸಾಮಗ್ರಿಗಳು ಬ್ರೈಲ್‌ ಲಿಪಿಯಲ್ಲಿ ಇರಬೇಕು’ ಎಂದು ಮನವಿ ಮಾಡಿತ್ತು. ಈ ಸಂಬಂಧ 2016ರ ನ.29ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಒಕ್ಕೂಟ ಉಲ್ಲೇಖಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ, ‘ಪುಸ್ತಕ ವಿತರಣೆ ಮಾಡಿ ಅನುಸರಣಾ ವರದಿಯನ್ನು ಎರಡು ವಾರಗಳಲ್ಲಿ ಸಲ್ಲಿಸಬೇಕು’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಅ.7ಕ್ಕೆ ಮುಂದೂಡಿತು.

ADVERTISEMENT

ಅಂಧ ಮಕ್ಕಳ ಅನುಕೂಲಕ್ಕಾಗಿ 107 ಪುಸ್ತಕಗಳನ್ನು ಈಗಾಗಲೇ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಸರ್ಕಾರ ಇದೇ ವೇಳೆ ವಿವರ ಸಲ್ಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.