ADVERTISEMENT

ತಗ್ಗಿದ ಪ್ರವಾಹ; ಸೇತುವೆಗಳು ಸಂಚಾರಕ್ಕೆ ಮುಕ್ತ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 21:58 IST
Last Updated 21 ಸೆಪ್ಟೆಂಬರ್ 2020, 21:58 IST
ತುಂಗಭದ್ರಾ ನದಿಗೆ ಅಧಿಕ ಪ್ರಮಾಣದ ನೀರನ್ನು ಹರಿಬಿಟ್ಟಿದ್ದರಿಂದ ಗಂಗಾವತಿ ತಾಲ್ಲೂಕಿನ ಚಿಕ್ಕಜಂತಕಲ್‌ ಹಾಗೂ ಬಳ್ಳಾರಿ ಜಿಲ್ಲೆ ಕಂಪ್ಲಿ ನಡುವಿನ ಸಂಪರ್ಕ ಸೇತುವೆ ಮುಳುಗುವ ಹಂತಕ್ಕೆ ತಲುಪಿರುವುದು
ತುಂಗಭದ್ರಾ ನದಿಗೆ ಅಧಿಕ ಪ್ರಮಾಣದ ನೀರನ್ನು ಹರಿಬಿಟ್ಟಿದ್ದರಿಂದ ಗಂಗಾವತಿ ತಾಲ್ಲೂಕಿನ ಚಿಕ್ಕಜಂತಕಲ್‌ ಹಾಗೂ ಬಳ್ಳಾರಿ ಜಿಲ್ಲೆ ಕಂಪ್ಲಿ ನಡುವಿನ ಸಂಪರ್ಕ ಸೇತುವೆ ಮುಳುಗುವ ಹಂತಕ್ಕೆ ತಲುಪಿರುವುದು   

ಕಲಬುರ್ಗಿ: ಕಲ್ಯಾಣ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಕಲಬುರ್ಗಿಜಿಲ್ಲೆಯಲ್ಲಿ ಭೀಮಾ ಹಾಗೂ ಕಾಗಿಣಾ ನದಿಗಳ ಪ್ರವಾಹ ಇಳಿಮುಖವಾಗಿದ್ದು, ಭೀಮಾ ನದಿ ಪ್ರವಾಹದಿಂದ ಮುಳುಗಡೆಯಾಗಿದ್ದ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ಹಾಗೂ ಘತ್ತರಗಾ ಬಳಿಯ ಸೇತುವೆಗಳು ಮಧ್ಯಾಹ್ನದ ಬಳಿಕ ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಕಮಲಾಪುರ ತಾಲ್ಲೂಕಿನ ಶ್ರೀಚಂದ ಗ್ರಾಮದ ಬಳಿಯ ಹಳ್ಳದಲ್ಲಿ ಬೈಕ್ ದಾಟಿಸುವ ವೇಳೆ ಕೊಚ್ಚಿಹೋಗಿದ್ದ ಅದೇ ಗ್ರಾಮದ ಪೀರಶೆಟ್ಟಿ ಬೋಧನ (29) ಎಂಬ ಯುವ ರೈತನ ಶವವನ್ನು ಎನ್‌ಡಿಆರ್‌ಎಫ್‌ ತಂಡ ಸೋಮವಾರ ಪತ್ತೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT