ADVERTISEMENT

ಕಮಿಷನ್ ಬೇಡಿಕೆ ಇಟ್ಟ ಸಚಿವ ಡಿ.ಕೆ.ಶಿವಕುಮಾರ್‌: ಬಿಎಸ್‌ವೈ ಆರೋಪ

​ಪ್ರಜಾವಾಣಿ ವಾರ್ತೆ
Published 29 ಜೂನ್ 2018, 10:52 IST
Last Updated 29 ಜೂನ್ 2018, 10:52 IST
ಬಿ.ಎಸ್‌.ಯಡಿಯೂರಪ್ಪ ಹಾಗೂ ಡಿ.ಕೆ.ಶಿವಕುಮಾರ್‌
ಬಿ.ಎಸ್‌.ಯಡಿಯೂರಪ್ಪ ಹಾಗೂ ಡಿ.ಕೆ.ಶಿವಕುಮಾರ್‌   

ಬೆಂಗಳೂರು: ಹಿಂದಿನ ಸರ್ಕಾರದಲ್ಲಿ ನೀಡಿದ ಕಮಿಷನ್ ಬೇರೆ, ಹೊಸದಾಗಿ ಕಮಿಷನ್ ಕೊಡಿ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಗುತ್ತಿಗೆದಾರರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಪಾದಿಸಿದರು.

ಪಕ್ಷದ ಕಾರ್ಯಕಾರಿಣಿ ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು, ‘ಹಿಂದಿನ ಸರ್ಕಾರದಲ್ಲಿ ಹೊಡೆದ ಕಮಿಷನ್ ಸಾಲದು ಅಂತ, ಈಗ ಮತ್ತೆ ಬೇಡಿಕೆ ಮಂಡಿಸಿದ್ದಾರೆ. ₹10 ಸಾವಿರ‌ ಕೋಟಿಗೂ ಹೆಚ್ಚಿನ ಬಿಲ್ ಬಾಕಿ ಇದ್ದು, ಕಮಿಷನ್‌ ಕೊಡದಿದ್ದರೆ ಬಾಕಿ ಪಾವತಿ ಮಾಡಬೇಡಿ ಎಂದು ಶಿವಕುಮಾರ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ’ ಎಂದುಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT