ADVERTISEMENT

 ಶಿವಮೊಗ್ಗ ಅಭಿವೃದ್ಧಿಗೆ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2019, 10:45 IST
Last Updated 30 ಸೆಪ್ಟೆಂಬರ್ 2019, 10:45 IST
   

ಶಿವಮೊಗ್ಗ:ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದುಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಶಿಕಾರಿಪುರದಲ್ಲಿ ಸೋಮವಾರ ನಡೆದಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.

‘ಜಿಲ್ಲೆಯಎಲ್ಲಾ ಪ್ರಮುಖ ನೀರಾವರಿ ಯೋಜನೆಗಳನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆಸೂಚನೆ ನೀಡಲಾಗಿದೆ’ಎಂದರು.

ADVERTISEMENT

‘ಹೊಸೂರು ಉಡುಗಣಿ ತಾಳಗುಂದ ನೀರಾವರಿ ಯೋಜನೆಗೆ ಈಗಾಗಲೇ 607 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.ಇದೇ ರೀತಿ ಹೊಸಳ್ಳಿ ಏತನೀರಾವರಿ ಕಲ್ಲೂರು ನೀರಾವರಿ ಯೋಜನೆ, ಸೊರಬ ತಾಲೂಕಿನ ಮೂರು ಏತ ನೀರಾವರಿ ಯೋಜನೆಗಳು ಸದ್ಯದಲ್ಲೇ ಆರಂಭವಾಗಲಿದೆ’ ಎಂದರು.

ಪ್ರವಾಹ ಪರಿಹಾರ ಕಾಮಗಾರಿಗಳನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅಕ್ಟೋಬರ್ ನಾಲ್ಕರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಲಾಗುವುದು.ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಿಕಾರಿಪುರದಲ್ಲಿ ಶಾಹಿ ಗಾರ್ಮೆಂಟ್ ಘಟಕ ಆರಂಭವಾಗಲಿದ್ದು, ಇದರಿಂದ ಈ ಭಾಗದ 2000ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯನ್ನು ಹತ್ತು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ₹ 45 ಕೋಟಿ ಹಣ ಬಿಡುಗಡೆ ಮಾಡಲಾಗಿದೆ.ಇದರಿಂದ ಹೆಚ್ಚಿನ ಕೈಗಾರಿಕೆಗಳು ಆರಂಭವಾಗಿ, ಉದ್ಯೋಗವಕಾಶ ಸೃಷ್ಟಿಯಾಗುವ ಭರವಸೆ ಹೊಂದಲಾಗಿದೆ ಎಂದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅವಕಾಶವಿದೆ.ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಡಾ.ಸುಧಾಮೂರ್ತಿ ಅವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ.ಮುಂದಿನ ದಿನಗಳಲ್ಲಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದ ಚಿತ್ರಣವೇ ಬದಲಾಗಲಿದೆ. ಜೋಗಜಲಪಾತದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸಂಸದಬಿ.ವೈ.ರಾಘವೇಂದ್ರ ಮಾತನಾಡಿ, ‘ಶಿವಮೊಗ್ಗ -ಶಿಕಾರಿಪುರ- ರಾಣೆಬೆನ್ನೂರು ರೈಲ್ವೆ ಮಾರ್ಗ ಯೋಜನೆ ಆದಷ್ಟು ಬೇಗನೆ ಕೈಗೆತ್ತಿಕೊಳ್ಳಲಾಗುವುದು.ಇದಕ್ಕಾಗಿ ರಾಜ್ಯ ಸರ್ಕಾರದ ಪಾಲು ₹150 ಕೋಟಿ ಹಣಬಿಡುಗಡೆ ಮಾಡಲಾಗುವುದು.ಯೋಜನೆಯ ಅನುಷ್ಠಾನಕ್ಕಾಗಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯನ್ನು ಮುಖ್ಯಮಂತ್ರಿಯವರು ಉದ್ಘಾಟಿಸಿದ್ದಾರೆ.ಕೋಟೆ ಗಂಗೂರುನಲ್ಲಿ ಸ್ಯಾಟಲೈಟ್ ರೈಲ್ವೆ ನಿಲ್ದಾಣ ಸ್ಥಾಪನೆಗೆ ₹60 ಕೋಟಿಅನುದಾನ ಮಂಜೂರುಮಾಡಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.