ADVERTISEMENT

ಮಳೆಹಾನಿ ಅವಲೋಕನ: ಮಂಗಳೂರು ತಲುಪಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2019, 6:10 IST
Last Updated 12 ಆಗಸ್ಟ್ 2019, 6:10 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ಮಂಗಳೂರು: ಮಳೆಹಾನಿ ಕುರಿತು ಪರಿಶೀಲನೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳೂರು ತಲುಪಿದ್ದಾರೆ‌.

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ, ಮಧ್ಯಾಹ್ನ ಧರ್ಮಸ್ಥಳದಲ್ಲಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ಸಭೆ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT