ADVERTISEMENT

ಒಡಿಶಾ ಸಿಎಂ ಜತೆಗೆ ಚರ್ಚೆ: ವಲಸೆ ಕಾರ್ಮಿಕರಿಗೆ ಉದ್ಯೋಗ ಭರವಸೆ ನೀಡಿದ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 2 ಮೇ 2020, 21:13 IST
Last Updated 2 ಮೇ 2020, 21:13 IST
   

ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಒಡಿಶಾದ ವಲಸೆ ಕಾರ್ಮಿಕರನ್ನು ಒಡಿಶಾಕ್ಕೆ ಕಳುಹಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಶನಿವಾರ ವಿಡಿಯೊ ಸಂವಾದ ನಡೆಸಿದರು.

‘ರಾಜ್ಯದಲ್ಲಿ ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಕಾರ್ಮಿಕರು ಹಸಿವಿನಿಂದ ಬಳಲದಂತೆ ಎಚ್ಚರ ವಹಿಸಲಾಗಿದೆ. ಕೇಂದ್ರದ ಮಾರ್ಗಸೂಚಿಗಳಂತೆ ವಿವಿಧ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದರಿಂದ ಬಹುತೇಕ ಕಾರ್ಮಿಕರಿಗೆ ಮತ್ತೆ ಉದ್ಯೋಗ ದೊರೆಯಲಿದೆ’ ಎಂದು ಮುಖ್ಯಮಂತ್ರಿ ತಿಳಿಸಿದರು.

‘ಹೊರ ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸುವ ಕುರಿತು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಒಡಿಶಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಮನ್ವಯ ನಿರ್ವಹಿಸಲಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.