ADVERTISEMENT

ಮೌನ ಮುರಿದ ಸಿಎಂ; ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆ ಬೇಡವೆಂದು ಮನವಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 16:05 IST
Last Updated 21 ಜುಲೈ 2021, 16:05 IST
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪರ ರಾಜ್ಯದ ವಿವಿಧ ಮಠಾಧೀಶರು ಬೆಂಬಲ ಸೂಚಿಸಿದ್ದು, ಮುಖ್ಯಮಂತ್ರಿ ಬದಲಾವಣೆ ಬೇಡ ಎಂದು ಸಂದೇಶ ಸಾರಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕೃತ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಎರಡು ದಿನಗಳಿಂದ ಮಠಾಧೀಶರ ಸಮಾವೇಶವೇ ನಡೆಯುತ್ತಿದೆ. ಅಲ್ಲಿ ಸೇರಿದ್ದ ಕೆಲವು ಸ್ವಾಮೀಜಿಗಳೆಲ್ಲ ಬಿಎಸ್‌ವೈ ಬೆನ್ನಿಗೆ ನಿಂತಿದ್ದು, ‘ಮುಖ್ಯಮಂತ್ರಿ ಹುದ್ದೆಯಲ್ಲಿ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು; ಅವಧಿ ಪೂರ್ಣಗೊಳಿಸುವ ಮುನ್ನವೇ ಅವರನ್ನು ಪದಚ್ಯುತಿಗೊಳಿಸಿದರೆ ಸಹಿಸಲಾಗದು. ಸಾಮೂಹಿಕವಾಗಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ’ ಎಂದು ಅನೇಕ ಮಠಾಧೀಶರು ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.