ADVERTISEMENT

ರಾಜ್ಯ ಉಸ್ತುವಾರಿಯ ಸಂದೇಶದ ಬಳಿಕ ಸಂಪುಟ ವಿಸ್ತರಣೆ ನಿರ್ಧಾರ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 11:22 IST
Last Updated 4 ಡಿಸೆಂಬರ್ 2020, 11:22 IST
   

ಬೆಳಗಾವಿ: ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದಿದ್ದಾರೆ. ಅವರು ಏನು ಸಂದೇಶ ತಂದಿದ್ದಾರೆ ಎನ್ನುವುದನ್ನು ಆಧರಿಸಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ಹಾಗೂ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲುಸಾಂಬ್ರಾ ವಿಮಾನನಿಲ್ದಾಣಕ್ಕೆ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಉಸ್ತುವಾರಿ ಎರಡು ದಿನ ಇಲ್ಲೇ ಇದ್ದು ನಮಗೆ ಮಾರ್ಗದರ್ಶನ ಮಾಡಲಿದ್ದಾರೆ. ನಮ್ಮ ಸರ್ಕಾರ ಬಂದ ಮೇಲೆ ನಡೆದ ಉಪ ಚುನಾವಣೆಗಳಲ್ಲಿ ನಾವು ಗೆದ್ದಿದ್ದೇವೆ. ಮುಂಬರುವ ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ. ವಾತಾವರಣ ನಮ್ಮ ಪರವಾಗಿದ್ದು ಅಲ್ಲೂ ಗೆಲ್ಲುತ್ತೇವೆ. ಗ್ರಾಮ ಪಂಚಾಯ್ತಿ‌ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಳ್ಳಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.