ADVERTISEMENT

ಶಾದಿಭಾಗ್ಯ ಯೋಜನೆ ರದ್ದುಪಡಿಸಿದ ರಾಜ್ಯ ಸರ್ಕಾರ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 19:50 IST
Last Updated 7 ಮಾರ್ಚ್ 2020, 19:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ‘ಶಾದಿಭಾಗ್ಯ’ ಯೋಜನೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರದ್ದುಪಡಿಸಿದೆ.

ಶನಿವಾರ ಸುತ್ತೋಲೆ ಹೊರಡಿಸಿರುವ ಅಲ್ಪಸಂಖ್ಯಾತರ ನಿರ್ದೇಶನಾಲಯ, ‘ಈ ವರ್ಷದ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸದಿರುವುದರಿಂದ ಶಾದಿಭಾಗ್ಯ (ಬಿದಾಯಿ) ಕ್ಕಾಗಿ ಹೊಸ ಅರ್ಜಿ ಸ್ವೀಕರಿಸುವುದನ್ನು ತಕ್ಷಣವೇ ನಿಲ್ಲಿಸಿ. ಮಂಜೂರಾತಿಗೆ ಬಾಕಿ ಇರುವ ವಿವರಗಳನ್ನು ಮಾ.9ರೊಳಗೆ ಸಲ್ಲಿಸಿ’ ಎಂದು ಅಲ್ಪಸಂಖ್ಯಾತ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದೆ.

ಮುಸ್ಲಿಂ, ಕ್ರೈಸ್ತ, ಜೈನ್‌, ಸಿಖ್‌ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಸೇರಿದ ಯುವತಿಯರ ಮದುವೆಗೆ ₹50 ಸಾವಿರ ನೀಡುವ ಯೋಜನೆ ಇದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.