ADVERTISEMENT

ಕೋವಿಡ್‌ | ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗುಣಮುಖ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 19:30 IST
Last Updated 10 ಆಗಸ್ಟ್ 2020, 19:30 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಣಿಪಾಲ ಆಸ್ಪತ್ರೆ ಸಿಬ್ಬಂದಿಗೆ ಕೈಮುಗಿದು ಧನ್ಯವಾದ ಹೇಳಿ ಹೊರಬರುತ್ತಿರುವುದು
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಣಿಪಾಲ ಆಸ್ಪತ್ರೆ ಸಿಬ್ಬಂದಿಗೆ ಕೈಮುಗಿದು ಧನ್ಯವಾದ ಹೇಳಿ ಹೊರಬರುತ್ತಿರುವುದು   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಆಸ್ಪತ್ರೆಯಿಂದ ನೇರವಾಗಿ ‘ಕಾವೇರಿ’ ನಿವಾಸ ತಲುಪಿದರು. ಒಂಬತ್ತು ದಿನಗಳು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಸೋಮವಾರ ಪರೀಕ್ಷೆ ಮಾಡಿದಾಗ ವರದಿ ನೆಗೆಟಿವ್‌ ಬಂದಿದೆ. ಹೀಗಾಗಿ ಮನೆಗೆ ತೆರಳಲು ವೈದ್ಯರು ಒಪ್ಪಿಗೆ ನೀಡಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಆಸ್ಪತ್ರೆಯಿಂದ ಹೊರಡುವ ಮೊದಲು ವೈದ್ಯರ ಬಳಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯ ಕುರಿತು ಯಡಿಯೂರಪ್ಪ ವಿಚಾರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.