ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು ₹22 ಲಕ್ಷ ಪರಿಹಾರವನ್ನು ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.
ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯ ಗೀತಾ, ಸವಿತಾ ಹಾಗೂ ಸೌಮ್ಯ ಅವರಿಗೆ ತಲಾ ₹5 ಲಕ್ಷ ಹಾಗೂ ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ರಶ್ಮಿ ಮತ್ತು ಇಂಚರಾ, ಕೆ.ಆರ್. ಪೇಟೆ ತಾಲ್ಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರಿಗೆ ತಲಾ ₹2 ಲಕ್ಷಗಳನ್ನು ಪರಿಹಾರ ನಿಧಿಯಿಂದ ತುರ್ತಾಗಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಇದನ್ನೂ ಓದಿ:ಪ್ರತ್ಯೇಕ ಘಟನೆ: ಏಳು ಮಂದಿ ನೀರು ಪಾಲು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.