ADVERTISEMENT

ಪ್ರಧಾನಿ ಮೋದಿ ಭೇಟಿಯಾದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ: ಕಾರಣ ಏನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2025, 11:42 IST
Last Updated 13 ಅಕ್ಟೋಬರ್ 2025, 11:42 IST
<div class="paragraphs"><p>ಮೋದಿ, ಯಡಿಯೂರಪ್ಪ</p></div>

ಮೋದಿ, ಯಡಿಯೂರಪ್ಪ

   

ಬೆಂಗಳೂರು: ನವದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೇಟಿಯಾದರು.

ಈ ಕುರಿತು ಅವರು ಎಕ್ಸ್‌ ಖಾತೆಯಲ್ಲಿ ಮೋದಿ ಜೊತೆಗಿನ ಫೋಟೊ ಹಂಚಿಕೊಂಡು ಪ್ರಧಾನಿ ಅವರನ್ನು ಭೇಟಿಯಾಗಿ ಮುಂಬರುವ ದೀಪಾವಳಿ ಶುಭಾಶಯಗಳನ್ನು ತಿಳಿಸಿದೆ ಎಂದು ಹೇಳಿಕೊಂಡಿದ್ದಾರೆ.

ADVERTISEMENT

ಇದಕ್ಕೂ ಮುನ್ನ ಬಿಹಾರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ನವದೆಹಲಿಯಲ್ಲಿ ನಡೆದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆಯಲ್ಲಿ ಯಡಿಯೂರಪ್ಪ ಪಾಲ್ಗೊಂಡಿದ್ದಾರೆ.

ಈ ಸಭೆಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಅವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.