ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿಯ ಬ್ಯಾನರ್‌ಗಳಿಂದಲೂ ಅವರ ಫೋಟೊ ತೆರವಾಗಿದೆ!
ಯಶವಂತಪುರ ಮಂಡಲ ಮಹಿಳಾ ಮೋರ್ಚಾ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಗಳು ಶನಿವಾರ ನಡೆದಿವೆ. ಎರಡೂ ಸಭೆಗಳ ವೇದಿಕೆಯಲ್ಲಿ ಅಳವಡಿಸಿದ್ದ ಬ್ಯಾನರ್‌ಗಳಲ್ಲಿ ಯಡಿಯೂರಪ್ಪ ಅವರ ಭಾವಚಿತ್ರವೇ ಇರಲಿಲ್ಲ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ವಿ. ಸದಾನಂದ ಗೌಡ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರ ಭಾವಚಿತ್ರಗಳನ್ನು ಬ್ಯಾನರ್‌ನಲ್ಲಿ ಹಾಕಲಾಗಿತ್ತು. ಆದರೆ, ಯಡಿಯೂರಪ್ಪ ಅವರ ಭಾವಚಿತ್ರವನ್ನು ಕೈಬಿಡಕಾಗಿತ್ತು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಐದು ದಿನ ಕಳೆಯುವಷ್ಟರಲ್ಲೇ ಯಡಿಯೂರಪ್ಪ ಅವರ ಫೋಟೋವನ್ನು ಪಕ್ಷದ ಬ್ಯಾನರ್‌ನಿಂದಲೂ ಕೈಬಿಟ್ಟಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಬಿಜೆಪಿ ಮುಖಂಡರ ನಿರ್ಧಾರಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.