ADVERTISEMENT

ಮತಾಂತರ ತಡೆ ಮಸೂದೆಗೆ ವಿರೋಧ ಬೇಡ: ಬಿಎಸ್‌ವೈ ಮನವಿ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 8:34 IST
Last Updated 21 ಡಿಸೆಂಬರ್ 2021, 8:34 IST
   

ಬೆಳಗಾವಿ (ಸುವರ್ಣ ವಿಧಾನಸೌಧ): ‘ಮತಾಂತರ ನಿಷೇಧ ಕಾಯ್ದೆ ರೂಪಿಸುವ ಉದ್ದೇಶದಿಂದ ಮಂಡಿಸಲಿರುವ ಮಸೂದೆಯನ್ನು ಯಾವುದೇ ಕಾರಣಕ್ಕೂ ವಿರೋಧಿಸಬೇಡಿ. ರಾಜ್ಯದ ಜನರ ಹಿತದೃಷ್ಟಿಯಿಂದ ಕಾಯ್ದೆ ತರಲಾಗುತ್ತಿದೆ’ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರಿಗೆ ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಮನವಿ ಮಾಡಿದರು.

‘ಈ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಲು ಸಹಕಾರ ನೀಡಬೇಕು. ಜನರನ್ನು ಭಾವನಾತ್ಮಕವಾಗಿ ಹಿಡಿದಿಟ್ಟುಕೊಳ್ಳಲು ಈ ಕಾಯ್ದೆ ತರುತ್ತಿಲ್ಲ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.