ADVERTISEMENT

ಕಣ್ಣೀರಿಗೆ ಕಾರಣರಾದವರು ಯಾರೆಂಬುದನ್ನು ಯಡಿಯೂರಪ್ಪ ಬಹಿರಂಗಪಡಿಸಲಿ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 9:36 IST
Last Updated 26 ಜುಲೈ 2021, 9:36 IST
ಯಡಿಯೂರಪ್ಪ ಮತ್ತು ಡಿಕೆ ಶಿವಕುಮಾರ್
ಯಡಿಯೂರಪ್ಪ ಮತ್ತು ಡಿಕೆ ಶಿವಕುಮಾರ್   

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ ಕಣ್ಣೀರು ಹಾಕಿದ್ದಾರೆ. ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರು ಯಾರು?' ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು’ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು’ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದರು.

‘ರಾಜೀನಾಮೆ ಕುರಿತ ನಮ್ಮ ಪಕ್ಷದ ಅಭಿಪ್ರಾಯವನ್ನು ಮುಂದೆ ತಿಳಿಸುತ್ತೇವೆ. ಆದರೆ, ಅದಕ್ಕೂ ಮೊದಲು ಮುಖ್ಯಮಂತ್ರಿ ತಮ್ಮ ನೋವಿನ ಬಗ್ಗೆ ಜನರಿಗೆ ತಿಳಿಸಬೇಕು. ಎರಡು ವರ್ಷಗಳಲ್ಲಿ ಜನರು ಕೋವಿಡ್ ಸಮಸ್ಯೆಗೆ ತುತ್ತಾಗಿದ್ದರಿಂದ ನೋವಾಯಿತೇ? ಪಕ್ಷದ ಶಾಸಕರನ್ನು ಹೈಕಮಾಂಡ್ ನಿಯಂತ್ರಣ ಮಾಡಲಿಲ್ಲ ಎಂದು ನೋವಾಯಿತೇ? ಎಂಬುದು ಜನರಿಗೆ ಗೊತ್ತಾಗಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.