ADVERTISEMENT

ಯಾವುದೇ ರೀತಿಯ ಬಂದ್‌ ಅಗತ್ಯವಿಲ್ಲ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 6:51 IST
Last Updated 4 ಡಿಸೆಂಬರ್ 2020, 6:51 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ರಾಜ್ಯದಲ್ಲಿ ಜನ ಸಾಮಾನ್ಯರಿಗೆ ತೊಂದರೆಯಾಗುವಂತಹ ಯಾವುದೇ ಬಂದ್‌ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕನ್ನಡ ಪರ ಸಂಘಟನೆಗಳು ನೀಡಿರುವ ರಾಜ್ಯವ್ಯಾಪಿ ಬಂದ್‌ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಂದ್‌ ಮಾಡುವುದರಿಂದ ಇತರರಿಗೆ ಅನಾನುಕೂಲತೆಗಳು ಆಗುತ್ತವೆ. ಆದಕ್ಕೆ ರಾಜ್ಯ ಸರ್ಕಾರ ಆಸ್ಪದ ಕೊಡುವುದಿಲ್ಲ’ಎಂದು ಹೇಳಿದರು.

‘ಸಮಾಜದ ಎಲ್ಲಾ ವರ್ಗದವರನ್ನು ಒಟ್ಟಿಗೆ ಕರೆದೊಯ್ಯುವುದಾಗಿ ನಾನು ಭರವಸೆ ನೀಡುತ್ತೇನೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.