ಬೆಂಗಳೂರು: ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಬೇಸರವನ್ನು ಶಮನ ಮಾಡಿರುವುದರಿಂದ ಕೊಪ್ಪಳದಲ್ಲಿ ಗುರುವಾರ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿವಿಧ ಜಿಲ್ಲಾ ಬಿಜೆಪಿ ಕಚೇರಿಗಳ ಉದ್ಘಾಟನೆಯನ್ನು ವರ್ಚುವಲ್ ಆಗಿ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮೊದಲು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿರಲಿಲ್ಲ. ಅಲ್ಲದೇ, ಜನಸಂಕಲ್ಪ ಯಾತ್ರೆಗೆ ಕರೆಯದೇ ನಿರ್ಲಕ್ಷಿಸುತ್ತಿದೆ ಎಂದು ಯಡಿಯೂರಪ್ಪ ಅವರು ಮುನಿಸಿಕೊಂಡಿದ್ದರು.
ಈ ವಿಷಯ ಬಹಿರಂಗವಾಗುತ್ತಿದ್ದಂತೆ ಅವರ ಮನವೊಲಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರಿಗೆ ವರಿಷ್ಠರು ಸೂಚಿಸಿದರು.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರವಿಕುಮಾರ್ ಕಾರ್ಯಕ್ರಮ ಆಹ್ವಾನಿಸಿ, ಬೇಸರ ಶಮನ ಮಾಡುವ ಪ್ರಯತ್ನ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.