
ಪ್ರಜಾವಾಣಿ ವಾರ್ತೆ
ನವದೆಹಲಿ: ಬಿಎಸ್‌ಎನ್‌ಎಲ್ ಟವರ್ ಸಮಸ್ಯೆ ಬಗೆಹರಿಸಬೇಕು ಹಾಗೂ ಬಿಎಸ್‌ಎನ್‌ಎಲ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹಿಸಿದರು.
ಲೋಕಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಚನ್ನಗಿರಿ ತಾಲ್ಲೂಕಿನ ಹಾಲೇಶಪುರ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಇನ್ನೂ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದರೂ ಪ್ರಯೋಜನ ಆಗಿಲ್ಲ. ತಕ್ಷಣವೇ ಬಿಎಸ್‌ಎನ್‌ಎಲ್ ಟವರ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.