ADVERTISEMENT

ಕಲಬುರ್ಗಿಯಲ್ಲಿ ಸಾವಿಗೀಡಾದ ವ್ಯಕ್ತಿಗೆ ಕೊರೊನಾ ಇರಲಿಲ್ಲ: ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2020, 11:53 IST
Last Updated 11 ಮಾರ್ಚ್ 2020, 11:53 IST
ಬಿ.ಶ್ರೀರಾಮುಲು
ಬಿ.ಶ್ರೀರಾಮುಲು   

ಕಲಬುರ್ಗಿ: ನಗರದ‌ ಎಂಎಸ್‌ಕೆ ಮಿಲ್ ಬಡಾವಣೆಯ ನಿವಾಸಿಯಾಗಿದ್ದ 76 ವರ್ಷದ ವೃದ್ಧರೊಬ್ಬರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ತಡ ರಾತ್ರಿ ಮೃತಪಟ್ಟಿದ್ದಾರೆ. ಕೊರೊನಾ ವೈರಸ್‌ನಿಂದ ಅವರು ಸಾವಿಗೀಡಾಗಿಲ್ಲ. ಅವರಿಗೆ ಜ್ವರ ಇತ್ತು, ನ್ಯುಮೋನಿಯಾ ಇತ್ತು, ಬೇರೆ ಬೇರೆ ರೋಗಗಳಿತ್ತು. ಹಾಗಾಗಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಆರೋಗ್ಯ ಪರೀಕ್ಷೆಗಾಗಿ ಹಲವಾರು ಮಂದಿ ಆಸ್ಪತ್ರೆಗೆ ಬರುತ್ತಿದ್ದಾರೆ. ರೋಗ ಲಕ್ಷಣಗಳಿದ್ದರೆ ಮಾತ್ರ ಪರೀಕ್ಷಿಸಿಕೊಳ್ಳಿ . ಕೊರೊನಾ ಬಗ್ಗೆ ಭಯಬೇಡ. ಈಗಾಗಲೇ 600 ಜನರಿಗೆ ಕೊರೊನಾ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT