ADVERTISEMENT

ಕುಮಾರಸ್ವಾಮಿಯವರಿಂದ ಸೇಡಿನ ರಾಜಕಾರಣ, ಎಸ್ಐಟಿ ತನಿಖೆಯಲ್ಲಿ ನಂಬಿಕೆ ಇಲ್ಲ: ರಾಮುಲು

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2019, 9:58 IST
Last Updated 12 ಫೆಬ್ರುವರಿ 2019, 9:58 IST
   

ಬೆಂಗಳೂರು:ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ಅಧೀನದಲ್ಲಿರುವ ಕಾರಣ ಆಡಿಯೊ ಪ್ರಕರಣದ ತನಿಖೆಯನ್ನುಎಸ್‌ಐಟಿಗೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಬಿ.ಶ್ರೀರಾಮುಲು ಆರೋಪಿಸಿದರು.

ಮಂಗಳವಾರ ಕಲಾಪ ಆರಂಭಕ್ಕೂ ಮುನ್ನ ಆಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ರಕರಣದಲ್ಲಿ ಅವರ(ಕುಮಾರಸ್ವಾಮಿ) ಹೆಸರೂ ಕೇಳಿಬಂದಿರುವುದರಿಂದ ಮುಖ್ಯಮಂತ್ರಿಗಳು ಮೊದಲು ರಾಜೀನಾಮೆ ನೀಡಲಿ. ಬಳಿಕ ತನಿಖೆಗೆ ಸಹಕರಿಸುತ್ತೇವೆ ಎಂದು ಹೇಳಿದರು.

ನಮಗೆ ಎಸ್‌ಐಟಿ ತನಿಖೆಯಲ್ಲಿ ನಂಬಿಕೆ ಇಲ್ಲ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.