ADVERTISEMENT

ಆಯೋಗಕ್ಕೆ ಬಿಎಸ್‌ವೈ ಪತ್ರ

ಮೂರು ಕ್ಷೇತ್ರಗಳಿಗೆ ಹಿರಿಯ ಅಧಿಕಾರಿಗಳ ನೇಮಕಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2019, 20:19 IST
Last Updated 28 ಮಾರ್ಚ್ 2019, 20:19 IST

ಬೆಂಗಳೂರು: ಮಂಡ್ಯ, ಹಾಸನ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಕೇಂದ್ರ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

‘ಈ ಮೂರೂ ಕ್ಷೇತ್ರಳಲ್ಲಿ ನಿಯಮ ಉಲ್ಲಂಘಿಸಲಾಗುತ್ತಿದೆ. ಕುಟುಂಬದ ಸದಸ್ಯರನ್ನು ಗೆಲ್ಲಿಸಿಕೊಂಡು ಬರಲು ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಈ ಹಿಂದೆಯೂ ಸಾಕಷ್ಟು ಸಲ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡಿದ್ದರು. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT