ADVERTISEMENT

ಪಾಟೀಲ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಬಿಎಸ್ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 13:03 IST
Last Updated 15 ಮಾರ್ಚ್ 2020, 13:03 IST
ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರನ್ನು ಭಾನುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಸಚಿವರಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್‌, ಸಂಸದೆ ಶೋಭಾ ಕರಂದ್ಲಾಜೆ ಇದ್ದಾರೆ

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಂಸ್ಥೆ(ಕಿಮ್ಸ್‌) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ, ಮಾಜಿ ರಾಜ್ಯಸಭಾ ಸದಸ್ಯ ಪಾಟೀಲ ಪುಟ್ಟಪ್ಪ ಅವರನ್ನು ಭಾನುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಾಪು ಆರೋಗ್ಯ ದಿನದಿಂದಕ್ಷೀಣಿಸುತ್ತಿದೆ. ಸದ್ಯ ಅವರು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದರು.

‘ರಾಜ್ಯ ಸರ್ಕಾರವು 2017ನೇ ಸಾಲಿನಲ್ಲಿ ಪಾಪು ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಬಸವ ಪುರಸ್ಕಾರವನ್ನು ಕಾರಣಾಂತರದಿಂದ ಇದುವರೆಗೂ ಅವರು ಸ್ವೀಕರಿಸಿಲ್ಲ. ಇನ್ನೆರಡು ದಿನದಲ್ಲಿ ಪುರಸ್ಕಾರದೊಂದಿಗೆ ಪ್ರಶಸ್ತಿ ಮೊತ್ತ ₹ 10 ಲಕ್ಷವನ್ನು ಅವರಿಗೆ ತಲುಪಿಸಲಾಗುವುದು ಹಾಗೂ ಆಸ್ಪತ್ರೆಯ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.