ADVERTISEMENT

ಮೈತ್ರಿ ವಿಷಯ ಚರ್ಚೆಗೆ ಬರಲಿಲ್ಲ: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2023, 15:44 IST
Last Updated 14 ಸೆಪ್ಟೆಂಬರ್ 2023, 15:44 IST
<div class="paragraphs"><p> ಬಿಎಸ್‌ವೈ </p></div>

ಬಿಎಸ್‌ವೈ

   

ಬೆಂಗಳೂರು: ‘ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಮೈತ್ರಿಯ ಕುರಿತು ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆ ನಡೆದಿಲ್ಲ. ವರಿಷ್ಠರು ಈ ಸಂಬಂಧ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಅದನ್ನು ಒಪ್ಪಿಕೊಳ್ಳುತ್ತೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ದೆಹಲಿಯಿಂದ ವಾಪಸಾದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ‘ನಿನ್ನೆಯ ಸಭೆಯಲ್ಲಿ ಜಿ20 ಶೃಂಗಸಭೆಯ ಯಶಸ್ಸಿನ ಬಗ್ಗೆಯಷ್ಟೇ ಚರ್ಚೆ ನಡೆಯಿತು. ರಾಜ್ಯದ ರಾಜಕೀಯ ಮತ್ತು ಜೆಡಿಎಸ್‌ ಜತೆಗಿನ ವಿಚಾರ ಪ್ರಸ್ತಾಪವಾಗಲಿಲ್ಲ’ ಎಂದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಈ ವಿಷಯಗಳನ್ನು ಪ್ರಸ್ತಾಪಿಸಲಿಲ್ಲ. ಅವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತವೆ. ನಾವು ವೈಯಕ್ತಿಕ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದರು.

‘ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರನ್ನು ಬಿಟ್ಟು ಅಕ್ಷಮ್ಯ ತಪ‍್ಪು ಮಾಡಿದೆ. ಕಾವೇರಿಯಿಂದ ಒಂದು ತೊಟ್ಟು ನೀರನ್ನೂ ಬಿಡಬಾರದಿತ್ತು. ನೀರು ಬಿಡುವುದನ್ನು ನಿಲ್ಲಿಸಬೇಕು. ರಾಜ್ಯ ಸರ್ಕಾರ ಬರ ನಿರ್ವಹಣೆಯ ಬಗ್ಗೆ ಗಮನ ಹರಿಸಿಲ್ಲ. ಕುಡಿಯುವ ನೀರು ಪೂರೈಕೆ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.