ADVERTISEMENT

ಉಡುಪಿ–ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಕಣಕ್ಕೆ: ಯಡಿಯೂರಪ್ಪ

ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಬಿಎಸ್‌ವೈ, ಶೋಭಾ ಕರಂದ್ಲಾಜೆ ಭೇಟಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2019, 10:22 IST
Last Updated 14 ಮಾರ್ಚ್ 2019, 10:22 IST
ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ  ಭೇಟಿ
ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ  ಭೇಟಿ   

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ,ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಅವರು ಭೇಟಿನೀಡಿ ಶೃಂಗೇರಿ ಶಾರದಾ ಮಠದಲ್ಲಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಶೃಂಗೇರಿಯಲ್ಲಿ ಗುರುವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರುಬಿ.ಎಸ್.ಯಡಿಯೂರಪ್ಪ, 'ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆ ಶೋಭಾಕರಂದ್ಲಾಜೆ ಅವರೇ ಕಣಕ್ಕಿಳಿಯಲಿದ್ದಾರೆ' ಎಂದು ಪ್ರತಿಕ್ರಿಯಿಸಿದರು.

'ಈ ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಇಲ್ಲ. ಶೋಭಾ ಅವರು ಗೆಲುವು ಸಾಧಿಸುತ್ತಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

'ಅಭ್ಯರ್ಥಿಗಳ ಅಖೈರು ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ. 18ರಂದು ದೆಹಲಿಯಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತೇವೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ' ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.