ADVERTISEMENT

‘ಜಿ.ಟಿ. ದೇವೇಗೌಡ ಸತ್ಯ ಹೇಳಿದ್ದಾರೆ’

​ಪ್ರಜಾವಾಣಿ ವಾರ್ತೆ
Published 2 ಮೇ 2019, 20:24 IST
Last Updated 2 ಮೇ 2019, 20:24 IST
   

ಬೆಂಗಳೂರು: ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಅವರು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಮಂಡ್ಯದ ಬಂಡಾಯ ಕಾಂಗ್ರೆಸ್‌ ನಾಯಕರು ಸುಮಲತಾ ಪರ ಕೆಲಸ ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ‘ಮೈಸೂರಿನಲ್ಲಿ ಜೆಡಿಎಸ್‌ ಮತಗಳು ಬಿಜೆಪಿಗೆ ಬಿದ್ದಿವೆ ಎಂಬ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ಸತ್ಯ. ನಮ್ಮ ಅಭ್ಯರ್ಥಿ ಪ್ರತಾಪಸಿಂಹ ಅವರಿಗೆ ಜೆಡಿಎಸ್‌ ಕಾರ್ಯಕರ್ತರು ಮತ ಹಾಕಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT