ADVERTISEMENT

ಸುವರ್ಣ ವಿಧಾನಸೌಧದಲ್ಲಿ ಪ್ರಮಾಣ ವಚನ: ನೆಟ್ಟಿಗರ ಮನವಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 19:46 IST
Last Updated 24 ಜುಲೈ 2019, 19:46 IST
ವೈರಲ್ ಆಗಿರುವ ಪೋಸ್ಟ್
ವೈರಲ್ ಆಗಿರುವ ಪೋಸ್ಟ್   

ಬೆಳಗಾವಿ: ಬಿ.ಎಸ್. ಯಡಿಯೂರಪ್ಪ ಅವರು ಇಲ್ಲಿನ ಸುವರ್ಣ ವಿಧಾನಸೌಧ ಮುಂಭಾಗ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

‘‌ಯಡಿಯೂರಪ್ಪ ‌ಇಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಬೇಕು’ ಎಂದು #TakeOathAtSuvarnaSoudha ಎನ್ನುವ ಹ್ಯಾಷ್‌ಟ್ಯಾಗ್‌ನಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ. ಇನ್‌ಸ್ಟಾಗ್ರಾಂ, ಟ್ವಿಟರ್‌ ಖಾತೆಗಳಲ್ಲೂ ಇದನ್ನು ಹಂಚಿಕೊಳ್ಳಲಾಗಿದೆ. ವಾಟ್ಸ್‌ಆ್ಯಪ್‌ನಲ್ಲೂ ಹರಿದಾಡುತ್ತಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರದ ನೆಟ್ಟಿಗರೆಲ್ಲ ಇದಕ್ಕೆ ಧ್ವನಿಗೂಡಿಸಿದ್ದಾರೆ.

ಬಹುತೇಕರು ಇತಿಹಾಸ ಸೃಷ್ಟಿಯಾಗಲಿ ಎಂದು ಹೇಳಿದ್ದರೆ, ಕೆಲವರು ಆಡಳಿತಾತ್ಮಕವಾಗಿ ಇದು ಅಸಾಧ್ಯ ಎಂದಿದ್ದಾರೆ. ವ್ಯಂಗ್ಯ, ಕುಹಕದ ಪ್ರತಿಕ್ರಿಯೆಗಳೂ ವ್ಯಕ್ತವಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.