ADVERTISEMENT

ಸೆಪ್ಟೆಂಬರ್ 7ರಂದು ಪ್ರಧಾನಿ ಮೋದಿ ಬೆಂಗಳೂರಿಗೆ: ಯಡಿಯೂರಪ್ಪ

ಚಾಮುಂಡೇಶ್ವರಿ ಸನ್ನಿಧಿಗೆ ಸಿಎಂ ಭೇಟಿ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2019, 6:28 IST
Last Updated 29 ಆಗಸ್ಟ್ 2019, 6:28 IST
   

ಮೈಸೂರು:ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಪ್ರವಾಹ ಸ್ಥಿತಿಗತಿಯನ್ನು ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ತಿಳಿಸಿದರು.

ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿದ ವೇಳೆಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಅಧ್ಯಯನ ತಂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ವರದಿ ನೀಡಲಿದೆ. ಮೂರು ದಿನಗಳಲ್ಲಿ ರಾಜ್ಯಕ್ಕೆ ಒಳ್ಳೆಯ ಸುದ್ದಿ ಸಿಗಲಿದೆ’ ಎಂದರು.

ಸಚಿವ ಸ್ಥಾನದಿಂದ ವಂಚಿತಗೊಂಡು, ಅಸಮಾಧಾನಗೊಂಡಿರುವ ಶಾಸಕ ಎಸ್.ಎ.ರಾಮದಾಸ್ ಅವರು ಮುಖ್ಯಮಂತ್ರಿಗಳದ್ದೇ ಕಾರಿನಲ್ಲಿ ಬೆಟ್ಟಕ್ಕೆ ಬಂದರು. ಉಸ್ತುವಾರಿ ಸಚಿವ ವಿ‌‌.ಸೋಮಣ್ಣ ಸಹ ಜತೆಗಿದ್ದರು.

ADVERTISEMENT

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.