ADVERTISEMENT

ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಬೇಡಿ: ಬಿಎಸ್‌ವೈ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 21:12 IST
Last Updated 16 ಜೂನ್ 2020, 21:12 IST
   

ಬೆಂಗಳೂರು: ‘ಆರ್ಥಿಕ ಸಂಕಷ್ಟಗಳಿದ್ದರೂ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಬೇಡಿ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಂಗಳವಾರ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇಲಾಖೆಯ ಕಾರ್ಯಕ್ರಮಗಳನ್ನು ಆದ್ಯತೆಗೆ ಅನುಸಾರ ಗುರುತಿಸಿ, ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.

‘2019-20ನೇ ಸಾಲಿನಲ್ಲಿ ಇಲಾಖೆಯ ಕಾರ್ಯಕ್ರಮ ಅನುಷ್ಠಾನದಲ್ಲಿ ಶೇ 97ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ ಪಡೆದ ಅಭ್ಯರ್ಥಿಗಳ ಪೈಕಿ, ಇಬ್ಬರು ಐಎಎಸ್, ಇಬ್ಬರು ಐಪಿಎಸ್, 13 ಮಂದಿ ಐಆರ್‌ಎಸ್‌ ಸೇವೆಗೆ ಆಯ್ಕೆಯಾಗಿದ್ದಾರೆ. ಒಟ್ಟು 268 ಅಭ್ಯರ್ಥಿಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಿ ವಿವಿಧ ಸೇವೆಗಳಿಗೆ ನೇಮಕಗೊಂಡಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ಆರೋಗ್ಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.