ADVERTISEMENT

ಕ್ಷಮೆ ಕೇಳಿದ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 16 ಜನವರಿ 2020, 19:59 IST
Last Updated 16 ಜನವರಿ 2020, 19:59 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ಬೆಂಗಳೂರು: ಹರಿಹರದ ಹರಜಾತ್ರೆಯಲ್ಲಿ ನಡೆದ ಘಟನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ಷಮೆ ಕೇಳಿದ್ದಾರೆ. ‘ನಾನು ಆಡಿದ ಮಾತುಗಳಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಇರಲಿ’ ಎಂದು ತಿಳಿಸಿದ್ದಾರೆ.

ವಿವಿಧ ಸಮಾಜಗಳ ಒತ್ತಡ ಸರ್ಕಾರದ ಮೇಲೆ ಇರುತ್ತದೆ. ವಚನಾನಂದ ಸ್ವಾಮೀಜಿ ಹೇಳಿಕೆ ಸಹಜ ಪ್ರಕ್ರಿಯೆ. ಈ ಬಗ್ಗೆ ಚರ್ಚೆ ಅನವಶ್ಯಕ ಎಂದಿದ್ದಾರೆ.

‘ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವುದು ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿ. ಎಲ್ಲಾ ಸ್ವಾಮೀಜಿಗಳು ಪ್ರೀತಿಯಿಂದ ಕಾಣುತ್ತಾರೆ. ನನ್ನ ಮೇಲೆ ಇದ್ದ ಸಲುಗೆ, ಪ್ರೀತಿಯಿಂದ ಇಂತಹ ಪ್ರಕ್ರಿಯೆಗಳು ಸಹಜ. ‘ಬೈದವರೆನ್ನ ಬಂಧುಗಳು’ ಎಂಬ ಬಸವಣ್ಣನವರ ಮಾತಿನಲ್ಲಿ ನಂಬಿಕೆ ಇಟ್ಟವನು. ನಾಡಿನ ಶರಣರು, ಸ್ವಾಮೀಜಿಗಳ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತದೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.