
ದಾವಣಗೆರೆ: ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಅನುಸರಿಸುತ್ತಿದ್ದ ಮಲತಾಯಿ ಧೋರಣೆ ಬಜೆಟ್‌ನಲ್ಲಿಯೂ ಮುಂದುವರಿದಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಸಮಾಧಾನ ವ್ಯಕ್ತಪಡಿಸಿದರು.
‘ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳನ್ನು ಸಮಾನವಾಗಿ ಕಾಣಬೇಕು. ಆದರೆ, ಅನುದಾನ ಹಂಚಿಕೆಯಲ್ಲಿ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಬಜೆಟ್ ಪೂರಕವಾಗಿಲ್ಲ. ಇದೊಂದು ನಿರಾಶಾದಾಯಕ ಬಜೆಟ್’ ಎಂದು ಭಾನುವಾರ ಸುದ್ದಿಗಾರರ ಬಳಿ ದೂರಿದರು.
‘ಆಶ್ರಯ ಮನೆಗಳಿಗೆ ಹೆಚ್ಚು ನೆರವು ಸಿಗುವ ನಿರೀಕ್ಷೆ ಇತ್ತು. ರೈತರು, ಮಹಿಳೆಯರು, ಕಾರ್ಮಿಕರು ಸೇರಿದಂತೆ ದೇಶದ ಬಡವರ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಿದಂತೆ ಕಾಣುತ್ತಿಲ್ಲ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದರು. ಅವರ ಅಧಿಕಾರವಧಿಯಲ್ಲಿ ಕೃಷಿ ವಲಯಕ್ಕೆ ಹೆಚ್ಚು ಆರ್ಥಿಕ ನೆರವು ಸಿಕ್ಕಿತ್ತು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.