ಬೆಂಗಳೂರು: ಪ್ರಸಕ್ತ ಬಜೆಟ್‌ನಲ್ಲಿ ಪ್ರಕಟಿಸಿರುವ ಯೋಜನೆಗಳ ಅನುಷ್ಠಾನಕ್ಕೆ ತ್ವರಿತವಾಗಿ ಆದೇಶಗಳನ್ನು ಹೊರಡಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು, ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಈವರೆಗೂ ಹೊರಡಿಸಿರುವ ಆದೇಶಗಳ ಮಾಹಿತಿ ಪಡೆದರು. ಬಾಕಿ ಇರುವ ಕಾರ್ಯಕ್ರಮಗಳಲ್ಲಿ ಸಂಪುಟ ಸಭೆಯ ಅನುಮೋದನೆ ಅಗತ್ಯವಿಲ್ಲದ ಯೋಜನೆಗಳ ಅನುಷ್ಠಾನಕ್ಕೆ ತ್ವರಿತವಾಗಿ ಆದೇಶ ಹೊರಡಿಸಬೇಕು ಎಂದು ನಿರ್ದೇಶನ ನೀಡಿದರು ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ವೆಚ್ಚದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ತ್ವರಿತವಾಗಿ ಕಾರ್ಯ ಸಾಧ್ಯತಾ ವರದಿ, ಪರಿಸರ ಹಾನಿ ಕುರಿತ ಅಧ್ಯಯನ ವರದಿಗಳನ್ನು ಪಡೆಯಲು ಪ್ರಕ್ರಿಯೆ ಆರಂಭಿಸಬೇಕು ಎಂಬ ಸೂಚನೆಯನ್ನು ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.