ADVERTISEMENT

ನೇಕಾರರ ನೆರವು ₹5 ಸಾವಿರಕ್ಕೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 15:07 IST
Last Updated 4 ಮಾರ್ಚ್ 2022, 15:07 IST

ಬೆಂಗಳೂರು: ನೋಂದಾಯಿತ ಕೈಮಗ್ಗ ನೇಕಾರರಿಗೆ ‘ನೇಕಾರರ ಸಮ್ಮಾನ್‌’ ಯೋಜನೆಯಡಿಯಲ್ಲಿ ನೀಡಲಾಗುತ್ತಿದ್ದ ವಾರ್ಷಿಕ ಆರ್ಥಿಕ ನೆರವನ್ನು ₹2 ಸಾವಿರದಿಂದ ₹5 ಸಾವಿರಕ್ಕೆ ಹೆಚ್ಚಿಸಲಾಗಿದೆ.

ನೇಕಾರರು, ನೇಕಾರಿಕೆಗಾಗಿ ಎದುರಿಸುತ್ತಿರುವ ಬಂಡವಾಳ ಕೊರತೆ ನೀಗಿಸಲು ರಾಜ್ಯದ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳ ಮೂಲಕ ಪಡೆಯುವ ಸಾಲದ ಮೇಲೆ ರಾಜ್ಯ ಸರ್ಕಾರವು ಶೇ 8ರಷ್ಟು ಬಡ್ಡಿ ಸಹಾಯಧನ ನೀಡಲು ತೀರ್ಮಾನಿಸಿದೆ.

ವಿದೇಶಿ ಹೂಡಿಕೆ ಆಕರ್ಷಿಸಲು ಬೆಂಗಳೂರಿನಲ್ಲಿ 2022ರ ನವೆಂಬರ್‌ 2ರಿಂದ 4ರವರೆಗೆ ‘ಇನ್ವೆಸ್ಟ್‌ ಕರ್ನಾಟಕ–2022’ ಜಾಗತಿಕ ಹೂಡಿಕೆದಾರರ ಸಭೆ ಆಯೋಜಿಸಲು ನಿರ್ಧರಿಸಲಾಗಿದೆ.

ADVERTISEMENT

*ನೇಕಾರರ ಮಕ್ಕಳು ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಕೈಗೊಳ್ಳುವುದನ್ನು ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನ.

*ಪೌರ ಕಾರ್ಮಿಕರಿಗೆ ಮಾಸಿಕ ₹2 ಸಾವಿರ ಸಂಕಷ್ಟ ಭತ್ಯೆ.

*ದುರ್ಬಲ ವರ್ಗದವರು ಉದ್ಯಮಶೀಲರಾಗುವುದನ್ನು ಉತ್ತೇಜಿಸಲು ಕೆ.ಐ.ಎ.ಡಿ.ಬಿ ಅಥವಾ ಕೆ.ಎಸ್‌.ಎಸ್‌.ಐ.ಡಿ.ಸಿ. ಸಂಸ್ಥೆಗಳು ಸ್ಥಾಪಿಸುವ ಹೊಸ ಕೈಗಾರಿಕಾ ಪ್ರದೇಶಗಳಲ್ಲಿನ ಸಣ್ಣ ನಿವೇಶನಗಳಲ್ಲಿ ಈ ವರ್ಗದವರಿಗೆ ಆದ್ಯತೆ.

*ರಾಜ್ಯದ ಜನರಿಗೆ ಹೆಚ್ಚಿನ ಉದ್ಯೋಗ ನೀಡುವ ಕೈಗಾರಿಕೆಗಳಿಗೆ ಹೆಚ್ಚುವರಿ ಪ್ರೋತ್ಸಾಹಕ ನೀಡಲು ಕ್ರಮ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.