
ಪ್ರಜಾವಾಣಿ ವಾರ್ತೆ
ಅಪಘಾತದ ದೃಶ್ಯ
ಹುಬ್ಬಳ್ಳಿ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಬಳಿಯ ಗೋರ್ಲತ್ತು ಕ್ರಾಸ್ ಸಮೀಪ ಖಾಸಗಿ ಬಸ್ ಹಾಗೂ ಕಂಟೇನರ್ ನಡುವೆ ಸಂಭವಿಸಿದ ದುರಂತದಲ್ಲಿ ಗಂಭೀರ ಗಾಯಗೊಂಡು ಇಲ್ಲಿನ ಕೆಎಂಸಿ-ಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಹಾವೇರಿ ಮೂಲದ ಮೊಹಮ್ಮದ್ ರಫೀಕ್ ಹುಲಗೂರ (45) ಮೃತಪಟ್ಟಿದ್ದಾರೆ.
'ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೊಹಮ್ಮದ್ ರಫೀಕ್ ಅವರ ಕಾಲು, ಹೊಟ್ಟೆಗೆ ಬಲವಾಗಿ ಪೆಟ್ಟುಬಿದ್ದಿತ್ತು. ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ' ಎಂದು ಕೆಎಂಸಿ-ಆರ್‌ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಈಶ್ವರ ಹಸಬಿ ತಿಳಿಸಿದ್ದಾರೆ.
'ಗಾಯಾಳು ಬಸ್ ಕ್ಲೀನರ್ ಮೊಹಮ್ಮದ್ ಸಾಧಿಕ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ' ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.