ADVERTISEMENT

ಕುಸುಗಲ | 44 ಪ್ರಯಾಣಿಕರಿದ್ದ ಬಸ್ ಪಲ್ಟಿ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

​ಪ್ರಜಾವಾಣಿ ವಾರ್ತೆ
Published 25 ಮೇ 2022, 15:48 IST
Last Updated 25 ಮೇ 2022, 15:48 IST
   

ಹುಬ್ಬಳ್ಳಿ: ನಗರದ ಹೊರವಲಯದ ಕುಸುಗಲ್ ರಸ್ತೆಯಲ್ಲಿ ಬುಧವಾರ ಸಂಜೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಏಳೆಂಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎಲ್ಲರಿಗೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ, ಮತ್ತೊಂದು ಬಸ್‌ನಲ್ಲಿ ಹುಬ್ಬಳ್ಳಿಗೆ ಕಳಿಸಲಾಗಿದೆ.

44 ಪ್ರಯಾಣಿಕರಿದ್ದ ಬಸ್ (ಕೆಎ– 63, ಎಫ್‌–0083) ವಿಜಯಪುರದಿಂದ ಹುಬ್ಬಳ್ಳಿಗೆ ಬರುತ್ತಿತ್ತು. ಕುಸುಗಲ್ ಬಳಿ ಎದುರಿಗೆ ಲಾರಿಯೊಂದು ವೇಗವಾಗಿ ಬಂದಿದೆ. ಆಗ ಚಾಲಕ ಬಸ್‌ ಅನ್ನು ಸ್ವಲ್ಪ ಎಡಕ್ಕೆ ಹೊರಳಿಸಿದಾಗ ರಸ್ತೆ ಪಕ್ಕಕ್ಕೆ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT