ಬೆಂಗಳೂರು: 2018–19ನೇ ಸಾಲಿನಲ್ಲಿ ವಿತರಣೆಯಾದ ಬಸ್ ಪಾಸ್ಗಳನ್ನು ತೋರಿಸಿ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಜೂನ್ 30ರವರೆಗೆ ಪ್ರಯಾಣಿಸಬಹುದು.
ವಿದ್ಯಾರ್ಥಿಗಳು ಪಾಸಿನ ಜತೆಗೆ ಪ್ರಸಕ್ತ ಸಾಲಿನ ಬೋಧನಾ ರಶೀದಿ ಶುಲ್ಕ ಅಥವಾ ಶಾಲೆ/ ಕಾಲೇಜಿನ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.