ಬೆಂಗಳೂರು: ಮೈಸೂರು, ಮಂಗಳೂರು, ಪುತ್ತೂರು, ಬೆಂಗಳೂರಿನಿಂದ ಕೇರಳ ರಾಜ್ಯಕ್ಕೆ ಜು.12ರಿಂದ ಬಸ್ ಸಂಚಾರ ಆರಂಭಿಸಲು ಕೆಎಸ್‌ಆರ್‌ಟಿಸಿ ನಿರ್ಧರಿಸಿದೆ.
ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‌ಗಳ ಕಾರ್ಯಾಚರಣೆ ಆರಂಭವಾಗಲಿದೆ. ಕೇರಳದಿಂದ ಬಸ್‌ನಲ್ಲಿ ಬರುವ ಪ್ರಯಾಣಿಕರು 72 ಗಂಟೆಗಳ ಒಳಗೆ ಕೋವಿಡ್ ಪರೀಕ್ಷೆ ಮಾಡಿಸಿದ ನೆಗೆಟಿವ್ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು. ಪ್ರತಿನಿತ್ಯ ರಾಜ್ಯಕ್ಕೆ ಬಂದು ಹೋಗುವ ಪ್ರಯಾಣಿಕರು 15 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ ನೆಗೆಟಿವ್ ವರದಿ ಹೊಂದಿರಬೇಕು’ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.