ADVERTISEMENT

ಬೆಳಗಾವಿ | ಹಾಟ್‌ಸ್ಪಾಟ್‌ ಹೊರತುಪಡಿಸಿ ಇತರೆಡೆ ಬಸ್‌ ಸಂಚಾರಕ್ಕೆ ಚಿಂತನೆ

ಸಾರಿಗೆ ಸಚಿವ ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 2 ಮೇ 2020, 9:27 IST
Last Updated 2 ಮೇ 2020, 9:27 IST
ಕೆಸ್ಎಸ್‌ಆರ್‌ಟಿಸಿ ಬಸ್‌ ನಿಲ್ದಾಣ– ಸಂಗ್ರಹ ಚಿತ್ರ
ಕೆಸ್ಎಸ್‌ಆರ್‌ಟಿಸಿ ಬಸ್‌ ನಿಲ್ದಾಣ– ಸಂಗ್ರಹ ಚಿತ್ರ   

ಬೆಳಗಾವಿ: ‘ಮಾರಕ ರೋಗ ಕೋವಿಡ್‌–19 ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿರುವ ಹಾಟ್‌ಸ್ಪಾಟ್‌ ಪ್ರದೇಶಗಳನ್ನು ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ಬಸ್‌ ಸಂಚಾರ ಆರಂಭಿಸುವ ಚಿಂತನೆ ನಡೆದಿದೆ’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ, ಹಿರೇಬಾಗೇವಾಡಿ ಹಾಗೂ ಕುಡಚಿ ಪ್ರದೇಶವನ್ನು ಹಾಟ್‌ಸ್ಪಾಟ್‌ ಪ್ರದೇಶವೆಂದು ಗುರುತಿಸಲಾಗಿದೆ. ಈ ಪ್ರದೇಶಗಳನ್ನು ಹೊರತುಪಡಿಸಿ, ಇನ್ನುಳಿದ ಆಯಾ ತಾಲ್ಲೂಕುಗಳಲ್ಲಿ ಬಸ್‌ ಸಂಚಾರ ಆರಂಭಿಸಲಾಗುವುದು’ ಎಂದರು.

‘ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯಬಾರದು. ನಿಗದಿತ ದರದಷ್ಟೇ ಹಣವನ್ನು ಪಡೆಯಬೇಕೆಂದು ಸಾರಿಗೆ ಸಿಬ್ಬಂದಿಗಳಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.