ADVERTISEMENT

ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವ ಬೆಂಗಳೂರಿನ ಬಸ್ ನಿಲ್ದಾಣಗಳು

​ಪ್ರಜಾವಾಣಿ ವಾರ್ತೆ
Published 31 ಮೇ 2020, 8:03 IST
Last Updated 31 ಮೇ 2020, 8:03 IST
ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವುದು
ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿರುವುದು   

ಬೆಂಗಳೂರು: ನಗರದ ಕೇಂದ್ರ ಬಸ್ ನಿಲ್ದಾಣ ಭಾನುವಾರ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು, ಚಾಲಕರು ಹಾಗೂ ಕಂಡಕ್ಟರ್‌ಗಳು ಪ್ರಯಾಣಿಕರಿಲ್ಲದೆ ಕುಳಿತಿರುವುದು ಕಂಡು ಬಂತು.

ಕೊರೊನಾ ಸೋಂಕು ಹರಡುವಿಕೆಯನ್ನು ತಡೆಗಟ್ಟಲುಸರ್ಕಾರ ಪ್ರತಿ ಭಾನುವಾರ ಲಾಕ್‌ಡೌನ್ ಘೋಷಣೆ ಮಾಡಿದೆ.ಈ ಕಾರಣದಿಂದಾಗಿ ಜನರು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದು ನಗರದ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದವು.ಕೇಂದ್ರ ಬಸ್ ನಿಲ್ದಾಣ, ಕೆಂಗೇರಿ ಬಸ್ ನಿಲ್ದಾಣ, ಬ್ಯಾಟರಾಯನಪುರ, ಶಾಂತಿನಗರಬಸ್ ನಿಲ್ದಾಣಗಳಲ್ಲೂ ಇದೇ ದೃಶ್ಯ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT