ADVERTISEMENT

ಕೆಫೆ ಉದ್ಯಮದ ಹರಿಕಾರ ವಿ.ಜಿ.ಸಿದ್ಧಾರ್ಥ ನಿಧನ

​ಪ್ರಜಾವಾಣಿ ವಾರ್ತೆ
Published 31 ಜುಲೈ 2019, 8:58 IST
Last Updated 31 ಜುಲೈ 2019, 8:58 IST
   

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ, ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ವಿ.ಜಿ.ಸಿದ್ದಾರ್ಥಹೆಗ್ಡೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ನಲ್ಲಿ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿರುವ ನೇತ್ರಾವತಿ ಸೇತುವೆ ಬಳಿ ಸಿದ್ದಾರ್ಥ ಅವರು ಸೋಮವಾರ ರಾತ್ರಿ ನಾಪತ್ತೆಯಾಗಿದ್ದರು. 36 ಗಂಟೆಗಳ ತೀವ್ರ ಶೋಧದ ನಂತರಹೊಯ್ಗೆಬಜಾರ್‌ನ ಅಳಿವೆ (ನದಿ ಮತ್ತು ಸಮುದ್ರ ಸೇರುವ ಸ್ಥಳ)ಬಾಗಿಲ ಬಳಿ ಅವರ ದೇಹ ಪತ್ತೆಯಾಯಿತು.

ಸಿದ್ಧಾರ್ಥ ಅವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿಯ (ಚೇತನಹಳ್ಳಿ ಎಸ್ಟೇಟ್‌) ಗಂಗಯ್ಯ ಹೆಗ್ಡೆ ಮತ್ತು ವಾಸಂತಿ ದಂಪತಿ ಮಗ.ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಪುತ್ರಿ ಮಾಳವಿಕಾ ಅವರನ್ನು ಇವರುವಿವಾಹವಾಗಿದ್ದರು. ಚಿಕ್ಕಮಗಳೂರಿನ ಮೌಂಟೇನ್‌ವ್ಯೂ ವಿದ್ಯಾಲಯದಲ್ಲಿ ಶಾಲಾ ವ್ಯಾಸಂಗ, ಮಂಗಳೂರಿನಲ್ಲಿ ಕಾಲೇಜು ವ್ಯಾಸಂಗ ಮಾಡಿದ್ದರು. ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಚಿಕ್ಕಮಗಳೂರು, ಹಾಸನ ಮೊದಲಾದ ಕಡೆಗಳಲ್ಲಿ ಕಾಫಿ ಕ್ಯೂರಿಂಗ್‌, ರೋಸ್ಟಿಂಗ್‌, ಖರೀದಿ, ಮಾರಾಟ ಘಟಕಗಳು ಇವೆ.ಜಿಲ್ಲೆಯ ಕತ್ತಲೆಖಾನ್‌, ಗಿರಿಖಾನ್‌, ಬಾಳೆಹೊನ್ನೂರು, ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ ಸುತ್ತಮುತ್ತಲಿನ ಭಾಗಗಳಲ್ಲಿ ಕಾಫಿ ತೋಟಗಳನ್ನು ಹೊಂದಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.