ADVERTISEMENT

ಉಪಚುನಾವಣೆ: ಬಿಜೆಪಿಯ ನಾಲ್ಕು ಅಭ್ಯರ್ಥಿಗಳ ಆಯ್ಕೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 20:24 IST
Last Updated 25 ಮಾರ್ಚ್ 2021, 20:24 IST
ಮಂಗಲಾ
ಮಂಗಲಾ   

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ
ಗಳನ್ನು ಪ್ರಕಟಿಸಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ದಿವಂಗತ ಸುರೇಶ್‌ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ,ಬಸವಕಲ್ಯಾಣ ಕ್ಷೇತ್ರಕ್ಕೆ ಶರಣು ಸಲಗರ, ಮಸ್ಕಿ ಕ್ಷೇತ್ರಕ್ಕೆ ಪ್ರತಾಪಗೌಡ ಪಾಟೀಲ ಅವರು ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿರುವ ಕೆ.ರತ್ನಪ್ರಭಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.