ನೆಲಮಂಗಲ: ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
‘ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಲಿದ್ದಾರೆ’ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.
‘ಕಳೆದ ಐದು ವರ್ಷಗಳಿಂದ ರಾಮನಗರದಲ್ಲಿ ನಾನು ಧ್ವಜಾರೋಹಣ ಮಾಡಿದ್ದೇನೆ. ಚನ್ನಪಟ್ಟಣದ ಬಗ್ಗೆ ಅಧಿಕಾರಿಗಳ ಬಳಿ ಕೇಳಿದಾಗ, ಆರು ವರ್ಷಗಳಿಂದ ಅಲ್ಲಿಗೆ ಬಂದು ಯಾರೂ ಧ್ವಜಾರೋಹಣ ನಡೆಸಿಲ್ಲ ಎಂದರು. ಅವರಿಗೆ ದೇಶದ ಮೇಲೆ ವಿಶ್ವಾಸವಿಲ್ಲ ಎಂದೆನಿಸುತ್ತದೆ. ಅವರು ಏನಾದರು ಮಾಡಿಕೊಳ್ಳಲಿ, ನಾನು ನನ್ನ ಕರ್ತವ್ಯ ಮಾಡಿದ್ದೇನೆ’ ಎಂದು ಪರೋಕ್ಷವಾಗಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.