
ಬೆಂಗಳೂರು: ‘ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದರು. ಈಗ ಎಲ್ಲವೂ ಅವರಿಗೆ ಮರೆತು ಹೋಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ವಿಧಾನಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿ ಬೆಳಗಾವಿಗೆ ಬಂದಾಗ 2.5 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಹೇಳಿದ್ದರು. ಈಗ ಅವರು ಕೂಡ ಬಾಯಿ ಬಿಡುತ್ತಿಲ್ಲ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರಿಗೆ ಕುರ್ಚಿ ಕಾಳಗದಿಂದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಮಯ ಸಿಗುತ್ತಿಲ್ಲ’ ಎಂದರು.
‘ಮುಖ್ಯಮಂತ್ರಿಯವರೇ ಯುವ ಜನರ ಪ್ರತಿಭಟನೆ ಪ್ರಾರಂಭವಾಗಿ ಎರಡು ವರ್ಷವಾಗಿದೆ. ಪ್ರತಿಭಟನೆ ಗಂಭೀರವಾಗಿ ಪರಿಗಣಿಸಿದ್ದೇವೆ ಎನ್ನಲು ನಿಮಗೆ ಎರಡು ವರ್ಷ ಬೇಕಾಯಿತೆ? ಯಾಕಿಷ್ಟು ದಿನ ನೀವು ಇದರ ಬಗ್ಗೆ ಚಕಾರ ಎತ್ತಿಲ್ಲ’ ಎಂದೂ ಅವರು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.