ADVERTISEMENT

ವಿದ್ಯುತ್ ಅಭಾವ: ರೈತರು ಸಂಕಷ್ಟದಲ್ಲಿ; ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 14:56 IST
Last Updated 21 ಫೆಬ್ರುವರಿ 2025, 14:56 IST
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ   

ಬೆಂಗಳೂರು: ಗ್ರಾಮಾಂತರ ಪ್ರದೇಶಗಳಿಗೆ ವಿದ್ಯುತ್‌ ಪೂರೈಕೆ ಅಸಮರ್ಪಕವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನಕ್ಕೆ ಕನಿಷ್ಠ 6 ರಿಂದ 7 ಗಂಟೆ ವಿದ್ಯುತ್‌ ಪೂರೈಕೆ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.

ರಾತ್ರಿ 10 ಗಂಟೆಯಿಂದಲೇ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಟ್ಟಿದೆ. ಆದರೆ, ರೈತರು ರಾತ್ರಿ 12 ಗಂಟೆವರೆಗೆ ಹೊಲದಲ್ಲಿ ಕಾದು ಕುಳಿತರೂ ವಿದ್ಯುತ್‌ ನೀಡುತ್ತಿಲ್ಲ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸರ್ಕಾರ ಗ್ಯಾರಂಟಿಗಳ ಭ್ರಮೆಯಿಂದ ಹೊರಗೆ ಬಂದು ವಾಸ್ತವ ಸಮಸ್ಯೆಗಳತ್ತ ಗಮನಹರಿಸಬೇಕು. ರೈತರನ್ನು ಸಂಕಷ್ಟಕ್ಕೆ ದೂಡಬಾರದು. ಒಂದು ವೇಳೆ ವಿದ್ಯುತ್ ಅಭಾವವಿದ್ದರೆ, ಹೊರರಾಜ್ಯಗಳಿಂದ ಖರೀದಿಸಿ ಪೂರೈಸಲಿ ಎಂದರು.

ADVERTISEMENT

ರಾಜ್ಯ ಸರ್ಕಾರ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿದೆ. ಇದು ಅವೈಜ್ಞಾನಿಕ ಮತ್ತು ಅವಿವೇಕದ ತೀರ್ಮಾನ. ಮುಂದಿನ 5 ವರ್ಷಗಳಿಗೆ ₹350 ಕೋಟಿ ಹಣಕಾಸು ಕೊಡಲು ಸರ್ಕಾರಕ್ಕೆ ಸಾಧ್ಯವಿಲ್ಲವೇ? ಹೀಗಾಗಿ ಸರ್ಕಾರದ ವಿರುದ್ಧ ರಾಜಕೀಯೇತರ ನೆಲೆಯಲ್ಲಿ ಹೋರಾಟ ಮಾಡಬೇಕಿದೆ. ಈ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ. ಯಾವುದೇ ಕಾರಣಕ್ಕೂ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಅವಕಾಶ ನೀಡುವುದಿಲ್ಲ ಎಂದರು.

ಒಂದು ಜಿಲ್ಲೆ ಒಂದು ವಿಶ್ವವಿದ್ಯಾಲಯ ಪರಿಕಲ್ಪನೆಯಡಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಹಣಕಾಸಿನ ಬಿಕ್ಕಟ್ಟನ್ನೇ ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರ ಅವಿವೇಕತನದ ನಿರ್ಧಾರ ತೆಗೆದುಕೊಳ್ಳಬಾರದು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.